Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 17 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಸೆಪ್ಟೆಂಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 24ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 24ನೇ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಬಿಂಗನ್‌ನ ಸಂತ ಹಿಲ್ಡೆಗಾರ್ಡ್, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ · ಐಚ್ಛಿಕ ಸ್ಮರಣೆ

ಸಂತ ರಾಬರ್ಟ್ ಬೆಲ್ಲಾರ್ಮಿನ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

1 ತಿಮೊ 6:2–12

2ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು. 3ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ, 4ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ. 5ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ. 6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. 7ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. 8ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. 9ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. 10ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ. 11ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. 12ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.

ಪ್ರತಿವಚನ ಕೀರ್ತನೆ

ಕೀರ್ತ 49:5–9, 16–19

5ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು? 6ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ. 7ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು. 8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು. 9ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು. 16ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ. 17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ. 18ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ, 19ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.

ಸುವಾರ್ತೆ

ಲೂಕ 8:1–3

1ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ, 2ದೆವ್ವಗಳ ಕಾಟದಿಂದಲೂ ರೋಗಗಳಿಂದಲೂ ಗುಣಹೊಂದಿದ ಕೆಲವು ಮಂದಿ ಹೆಂಗಸರು ಸಹ ಇದ್ದರು. ಈ ಹೆಂಗಸರು ಯಾರಾರೆಂದರೆ, ಏಳು ದುರಾತ್ಮಗಳಿಂದ ಬಿಡುಗಡೆ ಹೊಂದಿದ್ದ ಮಗ್ದಲದ ಮರಿಯಳು, 3ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು