Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 17 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 4 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಸೆಪ್ಟೆಂಬರ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 13ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Holy Prophet and God-seer Moses († 1531 BC)

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಕೊರಿ 11:5–21

5“ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ 6ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ. 7ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ? 8ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ. 9ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು. 10ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ. 11ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು. 12ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ. 13ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ. 14ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ, 15ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು. 16ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ. 17ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ. 18ಅನೇಕರು ಲೋಕಸಂಬಂಧವಾದ ಕಾರ್ಯಗಳಲ್ಲಿ ಹೊಗಳಿಕೊಳ್ಳುವುದರಿಂದ ನಾನೂ ಹೊಗಳಿಕೊಳ್ಳುತ್ತೇನೆ. 19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ 20ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ. 21ನಾವು ಬಲವಿಲ್ಲದವರಾಗಿದ್ದೆವೆಂಬುದನ್ನು ನಾಚಿಕೆಗೇಡಿನಿಂದ ಹೇಳುತ್ತಿದ್ದೇನೆ. ಯಾವ ಆಧಾರದಿಂದ ಯಾವನಾದರೂ ದೊಡ್ಡಸ್ತಿಕೆಯಿಂದ ಹೊಗಳಿಕೊಳ್ಳುತ್ತಾನೋ ಅದರಿಂದಲೇ ನಾನು ಹೊಗಳಿಕೊಳ್ಳುವುದಾಗಿ ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.

ಸುವಾರ್ತೆ

ಮಾರ್ಕ 4:1–9

1ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು. 2ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ: 3“ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. 4ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು. 5ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು; 6ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು. 7ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ. 8ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.” 9ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 17 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು