Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 18 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಸೆಪ್ಟೆಂಬರ್ 2027

ಶನಿವಾರ · ಪಂಚಾಶತ್ತಮದ ನಂತರದ 13ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Holy Prophet Zechariah and Righteous Elizabeth, parents of St John the Baptist (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಕೊರಿ 2:6–9

6ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. 7ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. 8ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; 9ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಸುವಾರ್ತೆ

ಮತ್ತಾ 22:15–22

15ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು 16ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು. 17ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. 18ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? 19ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. 20ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ 21ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. 22ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.

ಸುವಾರ್ತೆ (ಪ್ರವಾದಿ ಜಕರೀಯ, ಮುಂದೂತನ ತಂದೆ)

ಮತ್ತಾ 23:29–39

29ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ, 30‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ. 31ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. 32ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ. 33ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? 34ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ. 35ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು. 36ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 37“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. 38ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ. 39ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 18 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು