ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 19 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಸೆಪ್ಟೆಂಬರ್ 2027
ಭಾನುವಾರ · ಸಾಮಾನ್ಯ ಕಾಲದ 25ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 25ನೇ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 3ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ 4ಇಗೋ, ದೇವರೇ ನನಗೆ ಸಹಾಯಕನು; ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 6ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.
ಎರಡನೆಯ ವಾಚನ
16ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು. 17ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ. 18ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. 4:1ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? 2ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. 3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.
ಸುವಾರ್ತೆ
30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು. 31ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು. 32ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು. 33ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು. 34ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು. 35ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ, 36ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, 37“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
ಇಂದಿನ ಸಂತರು
- ಸಂತ ಜನುವಾರಿಯಸ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು