Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 19 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 6 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಸೆಪ್ಟೆಂಬರ್ 2027

ಭಾನುವಾರ · ಸ್ವರ 4

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 13ನೇ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಎರಡನೆಯ ಸುವಾರ್ತೆ

ಮಾರ್ಕ 16:1–8

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಪತ್ರಿಕೆ

1 ಕೊರಿ 16:13–24

13ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ. 14ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ. 15ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ. 16ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು. 17ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು. 18ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ. 19ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ. 20ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. 22ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ! 23ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ 24ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.

ಸುವಾರ್ತೆ

ಮತ್ತಾ 21:33–42

33“ಮತ್ತೊಂದು ಸಾಮ್ಯವನ್ನು ಕೇಳಿರಿ, ಒಬ್ಬ ಮನೆಯ ಯಜಮಾನನಿದ್ದನು. ಅವನು ಒಂದು ದ್ರಾಕ್ಷಾತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿಸಿ, ಅದರಲ್ಲಿ ದ್ರಾಕ್ಷಿಯ ಗಾಣವನ್ನು ಹಾಕಿಸಿ, ಕಾವಲು ಗೋಪುರವನ್ನು ಕಟ್ಟಿಸಿ, ದ್ರಾಕ್ಷಿಯ ತೋಟಗಾರರಿಗೆ ಅದನ್ನು ಗುತ್ತಿಗೆಗೆ ಕೊಟ್ಟು, ಅವನು ಬೇರೊಂದು ದೇಶಕ್ಕೆ ಹೋದನು. 34ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು, 35ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು. 36ಆ ಯಜಮಾನನು ಪುನಃ ಮೊದಲಿನವರಿಗಿಂತ ಹೆಚ್ಚು ಮಂದಿ ಆಳುಗಳನ್ನು ಕಳುಹಿಸಿದನು, ಅವರು ಅವರಿಗೂ ಹಾಗೆಯೇ ಮಾಡಿದರು. 37ಕಡೆಯಲ್ಲಿ ‘ನನ್ನ ಮಗನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು. 38ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು 39ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು. 40ಹಾಗಾದರೆ ದ್ರಾಕ್ಷಾತೋಟದ ಧಣಿಯು ಬಂದಾಗ ಆ ತೋಟಗಾರರಿಗೆ ಏನು ಮಾಡುವನು?” ಅಂದನು. 41ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು. 42ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 19 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು