ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 20 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಸೆಪ್ಟೆಂಬರ್ 2027
ಸೋಮವಾರ · ಸಾಮಾನ್ಯ ಕಾಲದ 25ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 25ನೇ ವಾರದ ಸೋಮವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತರಾದ ಆಂಡ್ರ್ಯೂ ಕಿಮ್ ಟೇ-ಗೊನ್, ಧರ್ಮಗುರು, ಮತ್ತು ಪಾಲ್ ಚೊಂಗ್ ಹಾ-ಸಾಂಗ್, ಮತ್ತು ಸಂಗಡಿಗರು, ಹುತಾತ್ಮರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು. 2ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ. 3ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ. 4ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು. 5ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು. 6ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು. 2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ. 4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು. 5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು, 6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಸುವಾರ್ತೆ
16“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. 17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು. 18ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.
ಇಂದಿನ ಸಂತರು
- ಸಂತರಾದ ಆಂಡ್ರ್ಯೂ ಕಿಮ್ ಟೇ-ಗೊನ್, ಧರ್ಮಗುರು, ಮತ್ತು ಪಾಲ್ ಚೊಂಗ್ ಹಾ-ಸಾಂಗ್, ಮತ್ತು ಸಂಗಡಿಗರು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು