ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 20 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 7 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಸೆಪ್ಟೆಂಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 14ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Forefeast of the Nativity of the Theotokos
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
10ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ. 11ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ. 12ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ. 13ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ. 14ಇಗೋ ನಾನು ನಿಮ್ಮ ಬಳಿಗೆ ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ. 15ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ? 16ಆದರೆ ಹೀಗಿರಲು, ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ. 17ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ? 18ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ? 19ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ.
ಪತ್ರಿಕೆ (ಮಂಗಳವಾರಕ್ಕೆ)
20ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. 21ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು. 13:1ನಾನು ನಿಮ್ಮ ಬಳಿಗೆ ಮೂರನೆಯ ಸಾರಿ ಬರುತ್ತಿದ್ದೇನೆ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ. 2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ ತಿರುಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ: ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುವವರಿಗೂ ಮತ್ತು ಮಿಕ್ಕಾದವರೆಲ್ಲರಿಗೂ ಹೇಳುತ್ತೇನೆ.
ಸುವಾರ್ತೆ
10ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು. 11ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.” 12“ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.” 13ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ? 14ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ. 15ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. 16“ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ; 17ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು. 18“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು; 19ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. 20ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು. 21ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? 22ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. 23ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.
ಸುವಾರ್ತೆ (ಮಂಗಳವಾರಕ್ಕೆ)
24ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. 25ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು. 26ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ 27ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ. 28ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ. 29ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು. 30ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ? 31ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. 32ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು. 33ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 34ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 20 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು