ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 21 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಸೆಪ್ಟೆಂಬರ್ 2027
ಮಂಗಳವಾರ · ಸಾಮಾನ್ಯ ಕಾಲದ 25ನೇ ವಾರ
ಹಬ್ಬಗಳು ಮತ್ತು ಸಂತರು
ಸಂತ ಮತ್ತಾಯ, ಅಪೊಸ್ತಲ ಮತ್ತು ಸುವಾರ್ತಿಕ
ಹಬ್ಬ · ಆರಾಧನಾ ಬಣ್ಣ: ಕೆಂಪು
ದಿನದ ವಾಚನಗಳು
ಮೊದಲನೆಯ ವಾಚನ
1ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. 2ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು, 5ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. 7ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 11ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ. 2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು. 3ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. 4ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.
ಸುವಾರ್ತೆ
9ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು. 10ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. 11ಅದನ್ನು ನೋಡಿದ ಫರಿಸಾಯರು ಆತನ ಶಿಷ್ಯರನ್ನು, “ನಿಮ್ಮ ಗುರುವು ಸುಂಕದವರು ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 12ಯೇಸು ಅದನ್ನು ಕೇಳಿ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು. 13ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
ಇಂದಿನ ಸಂತರು
- ಸಂತ ಮತ್ತಾಯ, ಅಪೊಸ್ತಲ ಮತ್ತು ಸುವಾರ್ತಿಕ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು