Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 22 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಸೆಪ್ಟೆಂಬರ್ 2027

ಬುಧವಾರ · ಸಾಮಾನ್ಯ ಕಾಲದ 25ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 25ನೇ ವಾರದ ಬುಧವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಎಜ್ರ 9:5–9

5ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ: 6“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ. 7ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು. 8ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ. 9ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.

ಪ್ರತಿವಚನ ಕೀರ್ತನೆ

ಈ ಅನುವಾದದಲ್ಲಿ ಇಲ್ಲ

ಸುವಾರ್ತೆ

ಲೂಕ 9:1–6

1ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು, 2ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು. 3ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು. 4ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ. 5ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು. 6ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು