ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 22 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 9 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಸೆಪ್ಟೆಂಬರ್ 2027
ಬುಧವಾರ · ಪಂಚಾಶತ್ತಮದ ನಂತರದ 14ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Afterfeast of the Nativity of the Theotokos
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
3ಕ್ರಿಸ್ತನು ನನ್ನಲ್ಲಿ ಮಾತನಾಡುತ್ತಾನೆಂಬುವುದಕ್ಕೆ ನೀವು ಸಾಕ್ಷಿ ಕೇಳಿದ್ದರಿಂದ ನಾನು ಹೀಗೆ ಹೇಳುತ್ತೇನೆ. ಆತನು ನಿಮ್ಮನ್ನು ಕುರಿತು ದುರ್ಬಲನಾಗಿರದೆ ಶಕ್ತನೇ ಆಗಿದ್ದಾನೆ. ಬಲವಾದ ಕೆಲಸಗಳನ್ನು ನಿಮ್ಮಲ್ಲಿ ನಡಿಸುವವನಾಗಿದ್ದಾನೆ. 4ಆತನು ಬಲಹೀನಾವಸ್ಥೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಜೀವಿಸುವವನಾಗಿದ್ದಾನೆ. ನಾವೂ ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ, ಆದರೂ ಆತನೊಂದಿಗೆ ದೇವರ ಬಲದಿಂದ ನಿಮಗಾಗಿ ಬದುಕುವವರಾಗಿದ್ದೇವೆ. 5ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. 6ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. 7ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. 8ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. 9ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ. 10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ. 11ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು. 12ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. 13ದೇವಜನರೆಲ್ಲರೂ ನಿಮಗೆ ವಂದನೆ ಹೇಳುತ್ತಾರೆ. 14ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ, ದೇವರ ಪ್ರೀತಿಯೂ, ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.
ಸುವಾರ್ತೆ
35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು. 36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು. 37ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು. 39ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. 40ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು 41ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 22 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು