Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 23 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಸೆಪ್ಟೆಂಬರ್ 2027

ಗುರುವಾರ · ಸಾಮಾನ್ಯ ಕಾಲದ 25ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 25ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಪಿಯೆತ್ರೆಲ್ಚಿನಾದ ಸಂತ ಪಿಯೊ (ಪಾದ್ರೆ ಪಿಯೊ), ಧರ್ಮಗುರು · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಹಗ್ಗಾ 1:1–8

1ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ, ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು. 2ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ. 3ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ಹೇಳಿದನು, 4“ಈ ನನ್ನ ಆಲಯವು ಹಾಳು ಬಿದ್ದಿರುವಾಗ, ನೀವು ನಿಮ್ಮ ಒಳಗೋಡೆಗೆಲ್ಲಾ ಸುಂದರ ಹಲಿಗೆ ಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವುದಕ್ಕೆ ಈ ಸಮುಯವು ತಕ್ಕದ್ದೋ?” 5ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ. 6ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.” 7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ. 8ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ.

ಪ್ರತಿವಚನ ಕೀರ್ತನೆ

ಕೀರ್ತ 149:1–6, 9

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ. 2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ. 3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ. 4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ. 5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ. 6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ. 9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.

ಸುವಾರ್ತೆ

ಲೂಕ 9:7–9

7ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಗೊಂಡನು, ಏಕೆಂದರೆ ಸತ್ತಿದ್ದ ಯೋಹಾನನು ತಿರುಗಿ ಬದುಕಿಬಂದಿದ್ದಾನೆಂದು ಕೆಲವರೂ, 8ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು. 9ಆದರೆ ಹೆರೋದನು, “ಯೋಹಾನನನ್ನು ನಾನೇ ಶಿರಚ್ಛೇದನಮಾಡಿಸಿದೆನಷ್ಟೆ. ಹಾಗಿದ್ದಲಿ ಇವನಾರು? ಇವನ ವಿಷಯವಾಗಿ ಆಶ್ಚರ್ಯಕರವಾದ ಸಂಗತಿಗಳನ್ನು ಕೇಳುತ್ತೇನಲ್ಲಾ” ಎಂದು ಹೇಳಿ ಅವನನ್ನು ನೋಡಬೇಕೆಂದು ಪ್ರಯತ್ನಿಸಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು