Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 23 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 10 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 23 ಸೆಪ್ಟೆಂಬರ್ 2027

ಗುರುವಾರ · ಪಂಚಾಶತ್ತಮದ ನಂತರದ 14ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Afterfeast of the Nativity of the Theotokos

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಗಲಾ 1:1–10, 20–2:5

1ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ 2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದೇನೆಂದರೆ, 3ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. 4ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. 5ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್. 6ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. 7ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. 8ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. 9ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು. 10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ. 20ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲವೆಂಬುದಕ್ಕೆ ಇಗೋ, ದೇವರೇ ಸಾಕ್ಷೀ. 21ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು. 22ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ. 23“ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ, 24ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು. 2:1ಹದಿನಾಲ್ಕು ವರ್ಷಗಳ ನಂತರ ನಾನು ಬಾರ್ನಬನ ಜೊತೆಯಲ್ಲಿ ತೀತನನ್ನು ಸಹ ಕರೆದುಕೊಂಡು, ಮತ್ತೊಮ್ಮೆ ಯೆರೂಸಲೇಮಿಗೆ ಹೋದೆನು. 2ದೈವಪ್ರೇರಣೆಗೆ ಅನುಸಾರವಾಗಿ ಹೋಗಿ, ಅನ್ಯಜನರಲ್ಲಿ ನಾನು ಸಾರುವ ಸುವಾರ್ತೆಯು ಏನೆಂಬುದನ್ನು ಅಲ್ಲಿದ್ದ ಗಣ್ಯರಿಗೆ ಪ್ರತ್ಯೇಕವಾಗಿ ತಿಳಿಸಿದೆನು. ಏಕೆಂದರೆ ನಾನು ಸುವಾರ್ತೆಗಾಗಿ ಪಟ್ಟ ಶ್ರಮವಾಗಲಿ, ಈಗ ಪಡುತ್ತಿರುವ ಶ್ರಮವಾಗಲಿ ನಿಷ್ಫಲವಾಗಬಾರದೆಂದು ತಿಳಿಸಿದೆನು. 3ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ. 4ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು. 5ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ.

ಸುವಾರ್ತೆ

ಮಾರ್ಕ 5:1–20

1ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು. 2ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. 3ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. 5ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. 6ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು, 7ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. 8ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು. 9ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ, 10ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು. 11ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. 12ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು. 13ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು. 14ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. 15ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. 16ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು. 17ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. 18ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು. 19ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು. 20ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 10 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 23 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು