ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 24 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಸೆಪ್ಟೆಂಬರ್ 2027
ಶುಕ್ರವಾರ · ಪಂಚಾಶತ್ತಮದ ನಂತರದ 14ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Afterfeast of the Nativity of the Theotokos
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
6ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ. 7ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. 8ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. 9ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು. 10ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.
ಸುವಾರ್ತೆ
22ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು, 23“ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. 24ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. 35ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು. 36ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು. 37ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. 38ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. 39ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು, 40ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ, 41ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ. 42ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು. 43ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು. 6:1ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 24 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು