Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 25 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಸೆಪ್ಟೆಂಬರ್ 2027

ಶನಿವಾರ · ಸಾಮಾನ್ಯ ಕಾಲದ 25ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 25ನೇ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಜೆಕ 2:1–5, 10–11

1ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು. 2ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು. 3ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು, 4“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು. 5ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ. 10ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. 11ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

ಪ್ರತಿವಚನ ಕೀರ್ತನೆ

ಯೆರೆ 31:10–13

10ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರ ದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲರನ್ನು ಚದರಿಸಿದಾತನು, ‘ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು’ ಎಂದು ಪ್ರಕಟಿಸಿರಿ. ಯೆಹೋವನು ಯಾಕೋಬ್ಯರನ್ನು ವಿಮೋಚಿಸಿದ್ದಾನಲ್ಲಾ, 11ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ. 12ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು. 13ಆಗ ಯುವತಿಯು ನಾಟ್ಯವಾಡುತ್ತಾ ಉಲ್ಲಾಸಿಸುವಳು; ಯುವಕರು ಮತ್ತು ವೃದ್ಧರು ಜೊತೆಯಾಗಿ ಹರ್ಷಿಸುವರು. ನಾನು ಅವರ ದುಃಖವನ್ನು ನೀಗಿಸಿ ಸಂತೋಷವನ್ನು ಉಂಟುಮಾಡಿ, ಅವರು ತಮ್ಮ ವ್ಯಸನವನ್ನು ಬಿಟ್ಟು ಆನಂದಿಸುವಂತೆ ಅವರನ್ನು ಸಂತೈಸುವೆನು.

ಸುವಾರ್ತೆ

ಲೂಕ 9:43–45

43ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ, 44“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು. 45ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು