ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 25 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 12 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಸೆಪ್ಟೆಂಬರ್ 2027
ಶನಿವಾರ · ಪಂಚಾಶತ್ತಮದ ನಂತರದ 14ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
ಶಿಲುಬೆಯ ಉನ್ನತೀಕರಣಕ್ಕೆ ಮುಂಚಿನ ಶನಿವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಶಿಲುಬೆಯ ಉನ್ನತೀಕರಣಕ್ಕೆ ಮುಂಚಿನ ಶನಿವಾರ)
6ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ. 7ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ. 8ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ; 9ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”
ಪತ್ರಿಕೆ
1ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ. 2ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ. 3ನನಗಾದರೂ ನಿಮ್ಮಿಂದಾಗಲಿ ಅಥವಾ ಮನುಷ್ಯರು ಮಾಡುವ ವಿಚಾರಣೆಯಾಗಲಿ ತೀರಾ ಲಘುವೆನಿಸಿದೆ. ನಾನೂ ನನ್ನನ್ನು ನ್ಯಾಯತೀರ್ಪು ಮಾಡಿಕೊಳ್ಳುವುದಿಲ್ಲ. 4ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ. 5ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.
ಪತ್ರಿಕೆ (ದೇವಮಾತೆ)
5ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. 6ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ, 7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು. 8ಆತನು ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. 9ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. 10ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು, 11ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.
ಸುವಾರ್ತೆ (ಶಿಲುಬೆಯ ಉನ್ನತೀಕರಣಕ್ಕೆ ಮುಂಚಿನ ಶನಿವಾರ)
37ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ. 38ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ. 39ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು. 40“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ. 41ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು. 42ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. 11:1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
ಸುವಾರ್ತೆ
1ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ, 2“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ; 3ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ. 4ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನು ಮುಟ್ಟಲೊಲ್ಲರು. 5ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ. 6ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು; 7ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ. 8ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು. 9ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ 10ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು 11ಆದರೆ ನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು. 12ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
ಸುವಾರ್ತೆ (ದೇವಮಾತೆ)
38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು. 11:27ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು. 28ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 25 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು