Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 27 ಸೆಪ್ಟೆಂಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 27 ಸೆಪ್ಟೆಂಬರ್ 2027

ಸೋಮವಾರ · ಸಾಮಾನ್ಯ ಕಾಲದ 26ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 26ನೇ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ವಿನ್ಸೆಂಟ್ ಡಿ ಪಾಲ್, ಧರ್ಮಗುರು · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಜೆಕ 8:1–8

1ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು. 2ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಚೀಯೋನಿಗೆ ಅವಮಾನವಾಯಿತಲ್ಲಾ ಎಂದು ಬಹಳವಾಗಿ ಕುದಿಯುತ್ತೇನೆ. ಅತಿರೋಷಗೊಂಡು ಕುದಿಯುತ್ತೇನೆ.” 3ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.” 4ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು. 5ಆ ಪಟ್ಟಣದ ಚೌಕಗಳಲ್ಲಿ ಆಟವಾಡುವ ಬಾಲಕ ಮತ್ತು ಬಾಲಕಿಯರು ತುಂಬಿಕೊಂಡಿರುವರು.” 6ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ. 7ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮದಿಕ್ಕಿನ ದೇಶದಿಂದಲೂ ಪಾರುಮಾಡಿ ಬರಗೊಳಿಸುವೆನು, 8ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”

ಪ್ರತಿವಚನ ಕೀರ್ತನೆ

ಕೀರ್ತ 102:15–20, 28, 21–22

15ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ, 16ಆತನು ಮಹಿಮೆಯಲ್ಲಿ ಬಂದು ಚೀಯೋನನ್ನು ತಿರುಗಿ ಕಟ್ಟಿಸಿದನೆಂದೂ, 17ಜನಾಂಗಗಳು ಯೆಹೋವ ಎಂಬ ನಿನ್ನ ನಾಮಕ್ಕೂ, ಭೂರಾಜರು ನಿನ್ನ ಪ್ರತಾಪಕ್ಕೂ ಭಯಪಡುವರು. 18ಇದು ಮುಂದಣ ಸಂತಾನದವರಿಗೋಸ್ಕರ ಶಾಸನವಾಗಿರಲಿ, ಮುಂದೆ ಹುಟ್ಟುವ ಪ್ರಜೆಯು ಯೆಹೋವನನ್ನು ಕೊಂಡಾಡುತ್ತಾ, 19“ಯೆಹೋವನು ತನ್ನ ಮಹೋನ್ನತವಾದ ಪವಿತ್ರಸ್ಥಾನದಿಂದ ಕೆಳಕ್ಕೆ ನೋಡಿದ್ದಾನೆ; ಆತನು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾನೆ. 20ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ, 28ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ. 21ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ. 22ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವನನ್ನು ಸೇವಿಸುತ್ತವೆ” ಎಂದು ಹೇಳುವುದು.

ಸುವಾರ್ತೆ

ಲೂಕ 9:46–50

46ತರುವಾಯ ಶಿಷ್ಯರೊಳಗೆ, ತಮ್ಮಲ್ಲಿ ಯಾವನು ಹೆಚ್ಚಿನವನು ಎಂಬ ವಿಚಾರಹುಟ್ಟಿತು. 47ಯೇಸು ಅವರ ಮನಸ್ಸಿನ ವಿಚಾರವನ್ನು ತಿಳಿದವನಾಗಿ, ಒಂದು ಚಿಕ್ಕಮಗುವನ್ನು ತನ್ನ ಪಕ್ಕದಲ್ಲಿ ನಿಲ್ಲಿಸಿ, 48ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು. 49ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು, 50ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು