ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 28 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಸೆಪ್ಟೆಂಬರ್ 2027
ಮಂಗಳವಾರ · ಸಾಮಾನ್ಯ ಕಾಲದ 26ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 26ನೇ ವಾರದ ಮಂಗಳವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ವೆನ್ಸೆಸ್ಲಾಸ್, ಹುತಾತ್ಮ · ಐಚ್ಛಿಕ ಸ್ಮರಣೆ
ಸಂತರಾದ ಲಾರೆನ್ಸ್ ರುಯಿಜ್ ಮತ್ತು ಸಂಗಡಿಗರು, ಹುತಾತ್ಮರು · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
20ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು; 21ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು. 22ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.” 23ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.
ಪ್ರತಿವಚನ ಕೀರ್ತನೆ
1ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ. 2ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. 3ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, 4“ರಹಬ, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. 5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. 6ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ 7ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.
ಸುವಾರ್ತೆ
51ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು. 52ತನ್ನ ಮುಂದಾಗಿ ದೂತರನ್ನು ಕಳುಹಿಸಿದನು. ಇವರು ಹೊರಟು ಆತನಿಗೆ ಬೇಕಾದದ್ದನ್ನು ಸಿದ್ಧಮಾಡುವುದಕ್ಕಾಗಿ ಸಮಾರ್ಯದವರ ಒಂದು ಹಳ್ಳಿಗೆ ಬಂದರು. 53ಆದರೆ ಯೇಸು ಯೆರೂಸಲೇಮಿಗೆ ಹೋಗುವವನಾದ್ದರಿಂದ, ಆ ಸಮಾರ್ಯದವರು ಆತನನ್ನು ಸೇರಿಸಿಕೊಳ್ಳಲಿಲ್ಲ. 54ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, 55ಯೇಸು ತಿರುಗಿಕೊಂಡು ಅವರನ್ನು ಗದರಿಸಿದನು. 56ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.
ಇಂದಿನ ಸಂತರು
- ಸಂತ ವೆನ್ಸೆಸ್ಲಾಸ್, ಹುತಾತ್ಮ
- ಸಂತರಾದ ಲಾರೆನ್ಸ್ ರುಯಿಜ್ ಮತ್ತು ಸಂಗಡಿಗರು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು