ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 28 ಸೆಪ್ಟೆಂಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 15 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಸೆಪ್ಟೆಂಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 15ನೇ ವಾರ · ಸ್ವರ 5
ಹಬ್ಬಗಳು ಮತ್ತು ಸಂತರು
Afterfeast of the Exaltation of the Cross
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಸೋಮವಾರಕ್ಕೆ)
11ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. 12ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು. 13ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. 14ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ಸರಿಯಾಗಿ ನಡೆಯುತ್ತಿಲ್ಲವೆಂಬುದನ್ನು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ, “ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ಬದುಕಿ, ಅನ್ಯಜನರಿಗೆ, ನೀವು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ಒತ್ತಾಯಪಡಿಸಿ ಹೇಳುವುದಾದರೂ ಹೇಗೆ?” 15ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.” 16ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.
ಪತ್ರಿಕೆ
21ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ. 3:1ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ? 2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ? 3ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ? 4ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? 5ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ? 6ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ. 7ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
ಸುವಾರ್ತೆ (ಸೋಮವಾರಕ್ಕೆ)
24ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. 25ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. 26ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ. 27ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. 29ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು. 30ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು 31ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು. 32ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ, 33ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. 34ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.
ಸುವಾರ್ತೆ
1ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 2ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? 3ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. 4ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು. 5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. 6ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು. 7ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 28 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು