ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 29 ಸೆಪ್ಟೆಂಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 29 ಸೆಪ್ಟೆಂಬರ್ 2027
ಬುಧವಾರ · ಸಾಮಾನ್ಯ ಕಾಲದ 26ನೇ ವಾರ
ಹಬ್ಬಗಳು ಮತ್ತು ಸಂತರು
ಸಂತರಾದ ಮೀಕಾಯೇಲ, ಗಬ್ರಿಯೇಲ ಮತ್ತು ರಫಾಯೇಲ, ಪ್ರಧಾನ ದೇವದೂತರು
ಹಬ್ಬ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: ಪ್ರಕ 12:7–12
9“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ. 10ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು. 13ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. 14ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. 2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. 3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. 4ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. 5ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ.
ಸುವಾರ್ತೆ
47ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು. 48ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು. 49ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು. 50ಅದಕ್ಕೆ ಯೇಸು “ಆ ಅಂಜೂರದ ಮರದ ಕೆಳಗೆ ನಿನ್ನನ್ನು ನೋಡಿದೆನೆಂದು ನಾನು ನಿನಗೆ ಹೇಳಿದ ಮಾತ್ರಕ್ಕೆ ನಂಬುತ್ತೀಯೋ? ನೀನು ಇವುಗಳಿಗಿಂತಲೂ ಹೆಚ್ಚಿನ ಮಹತ್ಕಾರ್ಯಗಳನ್ನು ನೋಡುವೆ,” ಎಂದನು. 51ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
ಇಂದಿನ ಸಂತರು
- ಸಂತರಾದ ಮೀಕಾಯೇಲ, ಗಬ್ರಿಯೇಲ ಮತ್ತು ರಫಾಯೇಲ, ಪ್ರಧಾನ ದೇವದೂತರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು