Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಸೆಪ್ಟೆಂಬರ್ 2027 › 30 ಸೆಪ್ಟೆಂಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 17 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 30 ಸೆಪ್ಟೆಂಬರ್ 2027

ಗುರುವಾರ · ಪಂಚಾಶತ್ತಮದ ನಂತರದ 15ನೇ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Afterfeast of the Exaltation of the Cross

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಗಲಾ 3:23–4:5

23ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. 24ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. 25ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. 26ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. 27ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. 4:1ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು. 2ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು. 3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲತತ್ವಗಳಿಗೆ ಅಧೀನರಾಗಿದ್ದೆವು. 4ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.

ಸುವಾರ್ತೆ

ಮಾರ್ಕ 6:30–45

30ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು. 31ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. 32ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು. 33ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. 34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು. 35ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು; 36ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು. 37ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು 38ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು. 39ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ, 40ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು. 41ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. 42ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. 43ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. 44ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು. 45ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 17 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 30 ಸೆಪ್ಟೆಂಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು