Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 1 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಅಕ್ಟೋಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 26ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 26ನೇ ವಾರದ ಶುಕ್ರವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಬಾಲ ಯೇಸುವಿನ ಸಂತ ತೆರೇಸಾ, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ · ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಈ ಅನುವಾದದಲ್ಲಿ ಇಲ್ಲ

ಪ್ರತಿವಚನ ಕೀರ್ತನೆ

ಕೀರ್ತ 79:1–5, 8–9

1ಆಸಾಫನ ಕೀರ್ತನೆ. ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು. 2ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು. 3ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ. 4ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು. 5ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ? 8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ. 9ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.

ಸುವಾರ್ತೆ

ಲೂಕ 10:13–16

13ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು. 14ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು. 15ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. 16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು