Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 1 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 18 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಅಕ್ಟೋಬರ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 15ನೇ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Afterfeast of the Exaltation of the Cross

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಗಲಾ 4:8–21

8ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ. 9ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ? 10ನೀವು ಆಯಾ ದಿನಗಳನ್ನೂ, ತಿಂಗಳುಗಳನ್ನೂ, ಕಾಲಗಳನ್ನೂ, ಸಂವತ್ಸರಗಳನ್ನೂ ನಿಷ್ಠೆಯಿಂದ ಆಚರಿಸಿದ್ದೀರಿ. 11ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ. 12ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ. 13ನಾನು ದೈಹಿಕವಾಗಿ ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲಿದ್ದು ಮೊದಲನೆಯ ಬಾರಿಗೆ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ. 14ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು ದೇವದೂತನಂತೆ, ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ. 15ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ. 16ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ? 17ಅವರು ನಿಮ್ಮನ್ನು ಮೆಚ್ಚಿಸುವುದಕ್ಕೆ ಆಸಕ್ತಿಯನ್ನು ತೋರಿಸುತ್ತಿರುವುದು ಒಳಿತಾಗಿ ಅಲ್ಲ, ನೀವು ಅವರಿಗೆ ಆಸಕ್ತಿಯನ್ನು ತೋರಿಸಬೇಕೆಂದು ಅವರು ನಿಮ್ಮನ್ನು ನನ್ನಿಂದ ಆಗಲಿಸುವುದಕ್ಕೆ ಬಯಸುತ್ತಿದ್ದಾರೆ. 18ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ. 19ನನ್ನ ಪ್ರಿಯರಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಾನು ನಿಮಗಾಗಿ ಪ್ರಸವವೇದನೆ ಪಡುತ್ತಿರುವೆನು. 20ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! 21ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ಸುವಾರ್ತೆ

ಮಾರ್ಕ 6:45–53

45ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು. 46ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. 47ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು. 48ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು. 49ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು. 50ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು. 51ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು. 52ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು. 53ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 1 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು