ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 2 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 2 ಅಕ್ಟೋಬರ್ 2027
ಶನಿವಾರ · ಸಾಮಾನ್ಯ ಕಾಲದ 26ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 26ನೇ ವಾರದ ಶನಿವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಪವಿತ್ರ ರಕ್ಷಕ ದೇವದೂತರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
32ದೀನರು ಇದನ್ನು ನೋಡಿ ಹರ್ಷಿಸುವರು. ದೇವದರ್ಶನವನ್ನು ಅಪೇಕ್ಷಿಸುವವರೇ, ನಿಮ್ಮ ಆತ್ಮವು ಉಜ್ಜೀವಿಸಲಿ. 33ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ. 34ಭೂಮ್ಯಾಕಾಶಗಳೂ, ಸಮುದ್ರಗಳೂ, ಜಲಚರಗಳೂ ಆತನನ್ನು ಕೊಂಡಾಡಲಿ. 35ದೇವರು ಚೀಯೋನ್ ಪಟ್ಟಣವನ್ನು ರಕ್ಷಿಸಿ, ಯೆಹೂದ ದೇಶದ ನಗರಗಳನ್ನು ಕಟ್ಟಿಸುವನು; ಆತನ ಪ್ರಜೆಗಳು ಅಲ್ಲಿ ವಾಸಮಾಡುತ್ತಾ ಅದನ್ನು ಸ್ವದೇಶವನ್ನಾಗಿ ಮಾಡಿಕೊಳ್ಳುವರು. 36ಅವರ ಸಂತತಿಗೇ ಅದರ ಹಕ್ಕಿರುವುದು; ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು.
ಸುವಾರ್ತೆ
1ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. 2ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, 3ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 4ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. 5ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. 10ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು