Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 2 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 19 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಅಕ್ಟೋಬರ್ 2027

ಶನಿವಾರ · ಪಂಚಾಶತ್ತಮದ ನಂತರದ 15ನೇ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

ಶಿಲುಬೆಯ ಉನ್ನತೀಕರಣದ ನಂತರದ ಶನಿವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ (ಶಿಲುಬೆಯ ಉನ್ನತೀಕರಣದ ನಂತರದ ಶನಿವಾರ)

1 ಕೊರಿ 1:26–29

26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. 27ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು. 28ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. 29ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.

ಪತ್ರಿಕೆ

1 ಕೊರಿ 4:17–5:5

17ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು. 18ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ. 19ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ. 20ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಅಡಗಿದೆ. 21ನಿಮ್ಮ ಇಷ್ಟವೇನು? ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ? 5:1ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ. 2ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ. 3ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ. 4ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ 5ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.

ಸುವಾರ್ತೆ (ಶಿಲುಬೆಯ ಉನ್ನತೀಕರಣದ ನಂತರದ ಶನಿವಾರ)

ಯೋಹಾ 8:21–30

21ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು. 22ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು. 23ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ. 24ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು. 25ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ. 26ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು. 27ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ. 28ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ. 29ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು. 30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

ಸುವಾರ್ತೆ

ಮತ್ತಾ 24:1–13

1ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು. 2ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು. 3ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು 4ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ. 5ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. 6ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 7ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು; 8ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ. 9“ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು. 10ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು. 11ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು. 12ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು. 13ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 2 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು