Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 4 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಅಕ್ಟೋಬರ್ 2027

ಸೋಮವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಸೋಮವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಅಸ್ಸಿಸಿಯ ಸಂತ ಫ್ರಾನ್ಸಿಸ್ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಯೋನ 1:1–17; 2:10

1ಯೆಹೋವನು ಅಮಿತ್ತೈಯನ ಮಗನಾದ ಯೋನನಿಗೆ ಹೇಳಿದ್ದೇನೆಂದರೆ, 2“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು. 3ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು. 4ಆಗ ಯೆಹೋವನು ದೊಡ್ಡ ಬಿರುಗಾಳಿಯನ್ನು ಸಮುದ್ರದ ಮೇಲೆ ಬರಮಾಡಿದನು. ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು. 5ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು. 6ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು. 7ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು. 8ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು 9ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ, 10ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು. 11ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು. 12ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು. 13ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು. 14ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು. 15ಆನಂತರ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಕೂಡಲೆ ಸಮುದ್ರವು ಭೋರ್ಗರೆಯುವುದನ್ನು ನಿಲ್ಲಿಸಿ ಶಾಂತವಾಯಿತು. 16ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು. 17ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು. 2:10ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.

ಪ್ರತಿವಚನ ಕೀರ್ತನೆ

ಯೋನ 2:2–4, 7

2“ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ. 3ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು 4‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’ 7“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.

ಸುವಾರ್ತೆ

ಲೂಕ 10:25–37

25ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, 26ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು. 27ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು. 28ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು. 29ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು, 30ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು. 31ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. 32ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು. 33ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ, 34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. 35ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು. 36ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ, 37ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು