ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 4 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಅಕ್ಟೋಬರ್ 2027
ಸೋಮವಾರ · ಪಂಚಾಶತ್ತಮದ ನಂತರದ 16ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Apodosis of the Exaltation of the Cross
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
28ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ. 29ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ. 30ಆದರೆ ದೇವರ ವಾಕ್ಯವು ಏನು ಹೇಳುತ್ತದೆ? “ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು. ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯಸ್ಥನಾಗಬಾರದು” ಎಂದು ಹೇಳುತ್ತದೆ. 31ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಸ್ವತಂತ್ರಳಾದವಳ ಮಕ್ಕಳೇ ಎಂದು ತಿಳಿದುಕೊಳ್ಳಿರಿ. 5:1ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. 2ನೋಡಿರಿ, ಪೌಲನೆಂಬ ನಾನು ನಿಮಗೆ ಹೇಳುತ್ತೇನೆ, ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ. 3ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ. 4ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ. 5ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ. 6ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ. 7ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು? 8ಈ ಮನವೊಲಿಕೆಯು ನಿಮ್ಮನ್ನು ಕರೆದಾತನಿಂದ ಹುಟ್ಟಿದ್ದಲ್ಲ. 9ಸ್ವಲ್ಪ ಹುಳಿಯಿಂದ ಕಣಕವೆಲ್ಲಾ ಹುಳಿಯಾಗುವುದು. 10ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗುವುದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತಾಗಿ ನನಗೆ ಭರವಸೆ ಉಂಟು. ನಿಮ್ಮಲ್ಲಿ ಬೇಧವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ, ಅವನು ದಂಡನೆಯನ್ನು ಅನುಭವಿಸುವನು.
ಸುವಾರ್ತೆ
19ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿಯೂ, ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿಮಿತ್ತವಾಗಿಯೂ ಯೋಹಾನನಿಂದ ಗದರಿಸಲ್ಪಟ್ಟಿದರಿಂದ, 20ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು. 21ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು 22ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 4 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು