Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 5 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಅಕ್ಟೋಬರ್ 2027

ಮಂಗಳವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಮಂಗಳವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಫೌಸ್ಟೀನಾ ಕೊವಾಲ್ಸ್ಕಾ, ಕನ್ಯೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಯೋನ 3:1–10

1ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು. 2ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು. 3ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು. 4ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು. 5ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. 6ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. 7ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. 8ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. 9ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು. 10ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.

ಪ್ರತಿವಚನ ಕೀರ್ತನೆ

ಕೀರ್ತ 130:1–4, 7–8

1ಯಾತ್ರಾಗೀತೆ. ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ. 2ಕರ್ತನೇ, ನನ್ನ ಮೊರೆಯನ್ನು ಕೇಳು; ನನ್ನ ವಿಜ್ಞಾಪನೆಯ ಶಬ್ದಕ್ಕೆ ಕಿವಿದೆರೆ. 3ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ? 4ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು. 7ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು. 8ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.

ಸುವಾರ್ತೆ

ಲೂಕ 10:38–42

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು. 39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು. 40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು. 41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು