ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 5 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 22 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಅಕ್ಟೋಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 16ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Prophet Jonah (8th C BC)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
11ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ? 12ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು. 13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. 14“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ. 15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ. 16ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. 17ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ. 18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ. 19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, 20ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, 21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಸುವಾರ್ತೆ
23ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು; 24ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು; 25ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ತಥೀಯನ ಮಗನು; ಮತ್ತಥೀಯನು ಆಮೋಸನ ಮಗನು; ಆಮೋಸನು ನಹೂಮನ ಮಗನು; ನಹೂಮನು ಎಸ್ಲಿಯ ಮಗನು; ಎಸ್ಲಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು; 26ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು; 27ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು; 28ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು; 29ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು; 30ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಕೀಮನ ಮಗನು; 31ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು; 32ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು; 33ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು; 34ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು; 35ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು; 36ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು; 37ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು; 38ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು. 4:1ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 5 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು