Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 6 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಅಕ್ಟೋಬರ್ 2027

ಬುಧವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಬ್ರೂನೊ, ಧರ್ಮಗುರು · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಯೋನ 4:1–11

1ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು. 2ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು. 3ಆದುದರಿಂದ ಯೆಹೋವನೇ, ನನ್ನ ಪ್ರಾಣವನ್ನು ತೆಗೆದುಕೋ; ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ವಿಜ್ಞಾಪಿಸಿಕೊಂಡನು. 4ಅದಕ್ಕೆ ಯೆಹೋವನು, “ನೀನು ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಿದನು. 5ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣದಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವುದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕುಳಿತುಕೊಂಡಿದ್ದನು. 6ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು. 7ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು. 8ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು. 9ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು. 10ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು; 11ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.

ಪ್ರತಿವಚನ ಕೀರ್ತನೆ

ಕೀರ್ತ 86:3–6, 9–10

3ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. 4ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. 5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. 6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. 9ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. 10ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.

ಸುವಾರ್ತೆ

ಲೂಕ 11:1–4

1ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು. 2ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. 3ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು. 4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು