Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 7 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 7 ಅಕ್ಟೋಬರ್ 2027

ಗುರುವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಜಪಮಾಲೆಯ ಮಾತೆ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಮಲಾ 3:13–4:2

13“ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ? 14ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು? 15ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ. 16ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. 17ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 18ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ. 4:1“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು. 2ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ಪ್ರತಿವಚನ ಕೀರ್ತನೆ

ಕೀರ್ತ 1:1–4, 6

1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಸುವಾರ್ತೆ

ಲೂಕ 11:5–13

5ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು. 6ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು, 7ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’ 8ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ. 9ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. 10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು. 11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? 12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ? 13ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು