ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 7 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 7 ಅಕ್ಟೋಬರ್ 2027
ಗುರುವಾರ · ಪಂಚಾಶತ್ತಮದ ನಂತರದ 16ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Protomartyr and Equal-to-the-Apostles Thekla (1st C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ, 2ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. 3ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು. 5ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. 6ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು. 7ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. 8ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. 9ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
ಪತ್ರಿಕೆ (ಶುಕ್ರವಾರಕ್ಕೆ)
7ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು. 8ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. 9ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. 10ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು. 11ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. 12ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. 13ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. 14ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. 15ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ, 16ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ. 17ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
ಸುವಾರ್ತೆ
16ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು. 17ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು, 18“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ 19ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.” 20ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, 21ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ, 22ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
ಸುವಾರ್ತೆ (ಶುಕ್ರವಾರಕ್ಕೆ)
22ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು. 23ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ. 24ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 25ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ; 26ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು. 27ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು. 28ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, 29ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು. 30ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 7 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು