Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 8 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 8 ಅಕ್ಟೋಬರ್ 2027

ಶುಕ್ರವಾರ · ಸಾಮಾನ್ಯ ಕಾಲದ 27ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 27ನೇ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಯೋವೇ 1:13–15; 2:1–2

13ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ. 14ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ. 15ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ. 2:1ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ. 2ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

ಪ್ರತಿವಚನ ಕೀರ್ತನೆ

ಕೀರ್ತ 9:1–2, 5, 15, 7–8

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 5ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 15ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 7ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.

ಸುವಾರ್ತೆ

ಲೂಕ 11:15–26

15ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು. 16ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು. 17ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು. 18ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, 19ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. 20ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ. 21“ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು; 22ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. 23ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. 24“ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು, 25ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ, 26ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು