ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 9 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 26 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 9 ಅಕ್ಟೋಬರ್ 2027
ಶನಿವಾರ · ಪಂಚಾಶತ್ತಮದ ನಂತರದ 16ನೇ ವಾರ · ಸ್ವರ 6
ಹಬ್ಬಗಳು ಮತ್ತು ಸಂತರು
Repose of the Holy Apostle and Evangelist John the Theologian († 98-117)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
21ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ದೋಷಿಗಳೆಂದು ಖಂಡಿಸಿ ನಡೆದರೆ ದೇವರ ಸನ್ನಿಧಿಯಲ್ಲಿ ನಮಗೆ ಭರವಸೆ ದೊರೆಯುತ್ತದೆ. 22ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು. 23ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ. 24ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ ಮತ್ತು ದೇವರು ಆತನಲ್ಲಿ ನೆಲೆಗೊಂಡಿರುತ್ತಾನೆ. ಆತನು ಅವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿರುವ ಆತ್ಮನಿಂದ ನಾವು ಬಲ್ಲವರಾಗಿದ್ದೇವೆ. 4:1ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. 2ದೇವರಾತ್ಮ ಪ್ರೇರಿತವಾದ ನುಡಿಗಳು ಎಂದು ತಿಳಿದುಕೊಳ್ಳುವುದು ಹೇಗೆಂದರೆ, ಯೇಸು ಕ್ರಿಸ್ತನು ಮನುಷ್ಯ ರೂಪವನ್ನು ಧರಿಸಿಕೊಂಡು ಬಂದನು ಎಂದು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾಗಿ ಬಂದದ್ದಾಗಿದೆ. 3ಯೇಸುಕ್ರಿಸ್ತನನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುತ್ತದೆಂಬುದನ್ನು ನೀವು ಕೇಳಿದ್ದೀರಲ್ಲಾ. ಅದು ಈಗಾಗಲೇ ಲೋಕದಲ್ಲಿ ಇದೆ. 4ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ. 5ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ. 6ನಾವಂತೂ ದೇವರಿಗೆ ಸಂಬಂಧಪಟ್ಟವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸಂಬಂಧಪಡದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದರಿಂದಲೇ ಸತ್ಯವನ್ನು ಬೋಧಿಸುವ ಆತ್ಮ ಯಾವುದು ಮತ್ತು ಸುಳ್ಳನ್ನು ಬೋಧಿಸುವ ಆತ್ಮ ಯಾವುದು ಎಂದು ನಾವು ತಿಳಿದುಕೊಳ್ಳುತ್ತೇವೆ.
ಸಂಧ್ಯಾ ಪ್ರಾರ್ಥನೆ: ವಾಚನ
11ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. 12ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ. 13ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ. 14ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ. 15ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. 16ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.
ಸಂಧ್ಯಾ ಪ್ರಾರ್ಥನೆ: ವಾಚನ
20ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? 21ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. 5:1ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ. 2ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. 3ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ. 4ಏಕೆಂದರೆ ದೇವರಿಂದ ಹುಟ್ಟಿದವನು ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದ್ದು ನಮ್ಮ ನಂಬಿಕೆಯೇ. 5ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?
ಉದಯಕಾಲದ ಪ್ರಾರ್ಥನೆ: ಸುವಾರ್ತೆ
15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ಪತ್ರಿಕೆ (ಸಂತ ಯೋಹಾನ)
12ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ. 13ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ. 14ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ. 15ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ. 16ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ. 17ನ್ಯಾಯತೀರ್ಪಿನ ದಿನದಲ್ಲಿ ನಾವು ಧೈರ್ಯದಿಂದಿರುವುದಕ್ಕಾಗಿ ಆತನ ಪ್ರೀತಿಯು ನಮ್ಮೊಳಗೆ ಪೂರ್ಣಗೊಂಡಿದೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ. 18ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ. 19ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
ಸುವಾರ್ತೆ (ಸಂತ ಯೋಹಾನ)
25ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. 26ಯೇಸು ತನ್ನ ತಾಯಿಯನ್ನೂ ಹತ್ತಿರದಲ್ಲಿ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಸ್ತ್ರೀಯೇ, ಇಗೋ, ನಿನ್ನ ಮಗನು” ಎಂದು ಹೇಳಿದನು. 27ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. 21:24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 9 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು