ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 11 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಅಕ್ಟೋಬರ್ 2027
ಸೋಮವಾರ · ಸಾಮಾನ್ಯ ಕಾಲದ 28ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 28ನೇ ವಾರದ ಸೋಮವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಜಾನ್ XXIII, ಪೋಪ್ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
1ಯೇಸು ಕ್ರಿಸ್ತನ ದಾಸನೂ, ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟವನೂ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಿಸಲ್ಪಟ್ಟವನೂ ಆಗಿರುವ ಪೌಲನು, 2ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ; 3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. 4ದೇವರು ಮುಂಚಿತವಾಗಿ ಪವಿತ್ರ ಗ್ರಂಥಗಳಲ್ಲಿ ತನ್ನ ಪ್ರವಾದಿಗಳ ಮೂಲಕ ತಿಳಿಸಲ್ಪಟ್ಟ ವಾಗ್ದಾನ ಮಾಡಿದ ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ಕುರಿತಾದದ್ದು. 5ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ ಪವಿತ್ರವಾದ ಆತ್ಮನ ಶಕ್ತಿಗನುಸಾರವಾಗಿ ಸತ್ತಮೇಲೆ ಜೀವಿತನಾಗಿ ಎದ್ದು ಬಂದು ದೇವಕುಮಾರನೆಂದು ನಿರ್ಣಯಿಸಲ್ಪಟ್ಟವನೂ ಆಗಿದ್ದಾನೆ. 6ಯೇಸು ಕ್ರಿಸ್ತನಲ್ಲಿ ಸೇರುವುದಕ್ಕೆ ಕರೆಯಲ್ಪಟ್ಟ ನೀವೂ ಸಹ ಆ ಅನ್ಯಜನರೊಳಗಿನವರಾದ್ದರಿಂದ ನಿಮಗೆ, 7ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು.
ಪ್ರತಿವಚನ ಕೀರ್ತನೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
ಸುವಾರ್ತೆ
29ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. 30ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. 31ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ. 32ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
ಇಂದಿನ ಸಂತರು
- ಸಂತ ಜಾನ್ XXIII, ಪೋಪ್
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು