Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 11 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 28 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಅಕ್ಟೋಬರ್ 2027

ಸೋಮವಾರ · ಪಂಚಾಶತ್ತಮದ ನಂತರದ 17ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Venerable Chariton the Confessor, Abbot of Palestine († c. 350)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಮತ್ತಾ 4:25–5:12

25ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು. 5:1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು. 2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ, 3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು. 4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು. 5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು. 6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು. 7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು. 8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು. 9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. 10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. 11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. 12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.

ಪತ್ರಿಕೆ

ಎಫೆ 1:22–2:3

22ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. 23ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ. 2:1ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ. 2ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ. 3ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.

ಪತ್ರಿಕೆ (ಸಂತ ಖಾರಿಟೋನ್)

2 ಕೊರಿ 4:6–15

6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. 7ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. 13“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.

ಸುವಾರ್ತೆ

ಲೂಕ 4:37–44

37ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು. 38ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು. 39ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು. 40ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. 41ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು. 42ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು. 43ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. 44ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.

ಸುವಾರ್ತೆ (ಸಂತ ಖಾರಿಟೋನ್)

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 11 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು