Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 12 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಅಕ್ಟೋಬರ್ 2027

ಮಂಗಳವಾರ · ಸಾಮಾನ್ಯ ಕಾಲದ 28ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 28ನೇ ವಾರದ ಮಂಗಳವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 1:16–25

16ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. 17ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ. 18ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ, 19ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು. 20ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. 21ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ. 22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು. 23ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು. 24ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು. 25ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.

ಪ್ರತಿವಚನ ಕೀರ್ತನೆ

ಕೀರ್ತ 19:1–4

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ. 2ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು. 3ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ. 4ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ.

ಸುವಾರ್ತೆ

ಲೂಕ 11:37–41

37ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು. 38ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು. 39ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ. 40ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ. 41ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು