ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 12 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 29 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 12 ಅಕ್ಟೋಬರ್ 2027
ಮಂಗಳವಾರ · ಪಂಚಾಶತ್ತಮದ ನಂತರದ 17ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Venerable Kyriakos the Hermit of Palestine († 556)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. 21ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. 22ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ. 3:1ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ. 2ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, 3ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ. 4ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. 5ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. 6ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. 7ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
ಪತ್ರಿಕೆ (ಏಕಾಂತವಾಸಿ ಸಂತ ಕಿರಿಯಾಕೋಸ್)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಸುವಾರ್ತೆ
12ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು. 13ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು. 14ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು. 15ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು. 16ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 12 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು