ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 13 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಸೆಪ್ಟೆಂಬರ್ 30 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಅಕ್ಟೋಬರ್ 2027
ಬುಧವಾರ · ಪಂಚಾಶತ್ತಮದ ನಂತರದ 17ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Hieromartyr Gregory, Bishop and Enlightener of Great Armenia († c. 335)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
8ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ 9ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. 10ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು. 12ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ. 13ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. 14ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು, 16ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ, 17ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ. 18ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.
ಪತ್ರಿಕೆ (ಗುರುವಾರಕ್ಕೆ)
14ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ, 15ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. 16ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. 17ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. 18ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ. 19ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
ಸುವಾರ್ತೆ
33ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು, 34ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ? 35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು. 36ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ. 37ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು. 38ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು. 39ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”
ಸುವಾರ್ತೆ (ಗುರುವಾರಕ್ಕೆ)
12ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು. 13ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು. 14ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ, 15ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, 16ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ. 17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 30 ಸೆಪ್ಟೆಂಬರ್ ಎಂದರೆ ನಾಗರಿಕ ಪಂಚಾಂಗದ 13 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು