ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 15 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಅಕ್ಟೋಬರ್ 2027
ಶುಕ್ರವಾರ · ಸಾಮಾನ್ಯ ಕಾಲದ 28ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 28ನೇ ವಾರದ ಶುಕ್ರವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಯೇಸುವಿನ ಸಂತ ತೆರೇಸಾ, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ · ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
1ಹಾಗಾದರೆ ವಂಶಾನುಕ್ರಮವಾಗಿ ನಮಗೆ ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು? 2ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ. 3ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ. 4ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು. 5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು. 6ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ, 7“ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು. 8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”
ಪ್ರತಿವಚನ ಕೀರ್ತನೆ
1ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು. 2ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು. 5ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ 11ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
ಸುವಾರ್ತೆ
1ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ. 2ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು. 3ಹೀಗಿರುವುದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವುದು. ಮತ್ತು ನೀವು ಕೋಣೆಗಳೊಳಗೆ ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು. 4“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು. 5ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ. 6ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. 7ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
ಇಂದಿನ ಸಂತರು
- ಯೇಸುವಿನ ಸಂತ ತೆರೇಸಾ, ಕನ್ಯೆ ಮತ್ತು ಧರ್ಮಸಭೆಯ ಪಂಡಿತೆ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು