Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 15 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಅಕ್ಟೋಬರ್ 2027

ಶುಕ್ರವಾರ · ಪಂಚಾಶತ್ತಮದ ನಂತರದ 17ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

Hieromartyr Cyprian and Virginmartyr Justina of Nicomedia († 304)

ಉಪವಾಸದ ದಿನ

ಉಪವಾಸ: ಎಣ್ಣೆಯೊಂದಿಗೆ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಎಫೆ 4:17–25

17ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ. 18ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ. 19ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ. 20ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ. 21ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. 22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 23ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ. 25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.

ಪತ್ರಿಕೆ (ಸಂತ ಸಿಪ್ರಿಯನ್)

1 ತಿಮೊ 1:12–17

12ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು; 14ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು. 15ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು. 16ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. 17ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಸುವಾರ್ತೆ

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 15 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು