ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 16 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ಅಕ್ಟೋಬರ್ 2027
ಶನಿವಾರ · ಸಾಮಾನ್ಯ ಕಾಲದ 28ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 28ನೇ ವಾರದ ಶನಿವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಹೆಡ್ವಿಗ್, ಸನ್ಯಾಸಿನಿ · ಐಚ್ಛಿಕ ಸ್ಮರಣೆ
ಸಂತ ಮಾರ್ಗರೆಟ್ ಮೇರಿ ಅಲಕೋಕ್, ಕನ್ಯೆ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
13ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ. 16ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ. 17“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು. 18“ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
ಪ್ರತಿವಚನ ಕೀರ್ತನೆ
6ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ. 7ಯೆಹೋವನೆಂಬಾತನೇ ನಮ್ಮ ದೇವರು; ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 8ಆತನು ತನ್ನ ವಾಗ್ದಾನವನ್ನು ಸಾವಿರ ತಲೆಗಳವರೆಗೂ, ತನ್ನ ಒಡಂಬಡಿಕೆಯನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳುತ್ತಾನೆ. 9ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು. 42ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು 43ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.
ಸುವಾರ್ತೆ
8“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು. 9ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ದೇವದೂತರ ಮುಂದೆ ನನ್ನವನಲ್ಲವೆಂದು ಹೇಳುವೆನು. 10ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ. 11ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ. 12ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.
ಇಂದಿನ ಸಂತರು
- ಸಂತ ಹೆಡ್ವಿಗ್, ಸನ್ಯಾಸಿನಿ
- ಸಂತ ಮಾರ್ಗರೆಟ್ ಮೇರಿ ಅಲಕೋಕ್, ಕನ್ಯೆ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು