ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 16 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 3 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಅಕ್ಟೋಬರ್ 2027
ಶನಿವಾರ · ಪಂಚಾಶತ್ತಮದ ನಂತರದ 17ನೇ ವಾರ · ಸ್ವರ 7
ಹಬ್ಬಗಳು ಮತ್ತು ಸಂತರು
Hieromartyr Dionysius the Areopagite, Bishop of Athens († 96)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
20ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ. 21“ಅನ್ಯಭಾಷೆಯವರ ಮೂಲಕವಾಗಿಯೂ ಅನ್ಯದೇಶಸ್ಥರ ಬಾಯಿಂದಲೂ ನಾನು ಈ ಜನರ ಸಂಗಡ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವುದಿಲ್ಲವೆಂದು ಕರ್ತನು ಹೇಳುತ್ತಾನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆದಿದೆ. 22ಆದ್ದರಿಂದ ಅನ್ಯಭಾಷೆಗಳನ್ನಾಡುವುದು ಯೇಸುವನ್ನು ನಂಬದವರಿಗೆ ಸೂಚನೆಯಾಗಿದೆಯೇ ಹೊರತು ಯೇಸುವನ್ನು ನಂಬುವವರಿಗೆ ಸೂಚನೆಯಲ್ಲವೆಂದು ನಾವು ತಿಳಿದುಕೊಳ್ಳಬೇಕು. ಆದರೆ ಪ್ರವಾದನೆಯು ಯೇಸುವನ್ನು ನಂಬದವರಿಗಾಗಿಯಲ್ಲ ನಂಬುವವರಿಗಾಗಿಯೇ ಇದೆ. 23ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಸೇರಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ ಈ ಭಾಷೆಯನ್ನು ತಿಳಿಯದ ಬೇರೆಯವರು ಅಥವಾ ಕ್ರಿಸ್ತ ನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ, ನಿಮಗೆ ಹುಚ್ಚು ಹಿಡಿದಿದೆ ಎಂದು ಹೇಳುವುದಿಲ್ಲವೋ? 24ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, 25ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.
ಪತ್ರಿಕೆ (ಅರಿಯೊಪಾಗದ ಸಂತ ದಿಯೊನುಸ್ಯ)
16ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು. 17ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು. 18ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು. 19ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ? 20ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು. 21ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ. 22ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ. 23ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. 24“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ; 25ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ. 26ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ, 27ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ. 28ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ. 29“ನಾವು ದೇವರ ಸಂತಾನದವರಾದ ಮೇಲೆ ದೇವರು ಮನುಷ್ಯನ ಶಿಲ್ಪವಿದ್ಯೆಯಿಂದಲೂ, ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ, ಬೆಳ್ಳಿ ಮತ್ತು ಕಲ್ಲುಗಳಿಗೆ ಸಮಾನವೆಂದು ನಾವು ಭಾವಿಸಬಾರದು. 30ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ. 31ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು. 32ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು. 33ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು. 34ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.
ಸುವಾರ್ತೆ
17ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು. 18ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು. 19ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು. 20ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು. 21ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು. 22ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು? 23ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ? 24ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು. 25ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. 26ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 16 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು