Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 17 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 17 ಅಕ್ಟೋಬರ್ 2027

ಭಾನುವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ಭಾನುವಾರ

ಭಾನುವಾರ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 53:10–11

10ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; 11ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಪ್ರತಿವಚನ ಕೀರ್ತನೆ

ಕೀರ್ತ 33:4–5, 18–20, 22

4ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ. 5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ. 18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. 19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು. 20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ. 22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.

ಎರಡನೆಯ ವಾಚನ

ಇಬ್ರಿ 4:14–16

14ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. 15ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. 16ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಸುವಾರ್ತೆ

ಮಾರ್ಕ 10:35–45

35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು. 36ಅದಕ್ಕೆ ಆತನು ಅವರಿಗೆ, “ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಲು, 37ಅವರು ಆತನಿಗೆ, “ನಾವು ಪರಲೋಕದಲ್ಲಿ ಮಹಾಪದವಿಯನ್ನು ಪಡೆದಾಗ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು” ಅಂದರು. 38ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ? ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. 39ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು. 40ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು. 41ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಯಾಕೋಬ ಯೋಹಾನರ ಮೇಲೆ ಸಿಟ್ಟಿಗೆದ್ದರು. 42ಯೇಸು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನಗಳ ಅಧಿಪತಿಗಳು ಎನ್ನಿಸಿಕೊಳ್ಳುವವರು ಅವರ ಮೇಲೆ ದೊರೆತನ ಮಾಡುತ್ತಾರೆ. ಮತ್ತು ಅವರಲ್ಲಿ ಮುಖ್ಯಸ್ಥರು ಅವರ ಮೇಲೆ ಅಧಿಕಾರ ನಡೆಸುತ್ತಾರೆ ಎಂದು ನೀವು ಬಲ್ಲಿರಷ್ಟೆ. 43ಆದರೆ ನಿಮ್ಮಲ್ಲಿ ಹಾಗಿರಬಾರದು; ನಿಮ್ಮಲ್ಲಿ ದೊಡ್ಡವನಾಗಬೇಕೆಂದಿರುವವನು ನಿಮ್ಮ ಸೇವಕನಾಗಬೇಕು. 44ನಿಮ್ಮಲ್ಲಿ ಮೊದಲನೆಯವನಾಗಬೇಕೆಂದಿರುವವನು ಎಲ್ಲರ ಆಳಾಗಬೇಕು. 45ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು