ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 17 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 4 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಅಕ್ಟೋಬರ್ 2027
ಭಾನುವಾರ · ಸ್ವರ 8
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ 17ನೇ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಉದಯಕಾಲದ ಆರನೆಯ ಸುವಾರ್ತೆ
36ಅವರು ಈ ಸಂಗತಿಗಳನ್ನು ಕುರಿತು ಮಾತನಾಡುತ್ತಿರುವಾಗ ಯೇಸುವೇ ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದು ಅವರಿಗೆ ಹೇಳಿದನು. 37ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು. 38ಆತನು ಅವರಿಗೆ, “ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಅನುಮಾನಗಳು ಹುಟ್ಟುವುದೇಕೆ? 39ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. 40ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು. 41ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು, 42ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು. 43ಆತನು ಅದನ್ನು ತೆಗೆದುಕೊಂಡು ಅವರ ಮುಂದೆ ತಿಂದನು. 44ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು. 45ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು. 46ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, 47ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ. 48ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ. 49ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. 50ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. 51ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು. 52ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, 53ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
ಪತ್ರಿಕೆ
16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ. 17ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ. 18ಇದಲ್ಲದೆ, “ನಾನು ನಿಮ್ಮನ್ನು ಸ್ವೀಕರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ, ಕುಮಾರಿಯರು ಆಗಿರುವಿರೆಂದು” ಸರ್ವಶಕ್ತನಾದ ಕರ್ತನು ಹೇಳುತ್ತಾನೆ. 7:1ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.
ಸುವಾರ್ತೆ
31ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. 32“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. 33ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. 34ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ. 35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. 36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 17 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು