Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 18 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಅಕ್ಟೋಬರ್ 2027

ಸೋಮವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Martyr Charitina of Amisus († 304)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಎಫೆ 4:25–32

25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. 27ಸೈತಾನನಿಗೆ ಅವಕಾಶಕೊಡಬೇಡಿರಿ. 28ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು. 30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. 31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

ಸುವಾರ್ತೆ

ಲೂಕ 6:24–30

24“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ. 25ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. 26“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು. 27“ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; 28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. 29ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. 30ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 18 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು