ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 19 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 19 ಅಕ್ಟೋಬರ್ 2027
ಮಂಗಳವಾರ · ಸಾಮಾನ್ಯ ಕಾಲದ 29ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 29ನೇ ವಾರದ ಮಂಗಳವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಶಿಲುಬೆಯ ಸಂತ ಪಾಲ್, ಧರ್ಮಗುರು · ಐಚ್ಛಿಕ ಸ್ಮರಣೆ
ಸಂತರಾದ ಜಾನ್ ಡಿ ಬ್ರೆಬೊಫ್ ಮತ್ತು ಐಸಾಕ್ ಜೋಗ್ಸ್, ಧರ್ಮಗುರುಗಳು, ಮತ್ತು ಸಂಗಡಿಗರು, ಹುತಾತ್ಮರು · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
12ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು. 15ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ. 17ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ. 18ಹೀಗಿರಲಾಗಿ ಆದಾಮನ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಮರಣವೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಕ್ರಿಸ್ತನ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವು ಫಲಿಸಿತು. 19ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. 20ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. 21ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.
ಪ್ರತಿವಚನ ಕೀರ್ತನೆ
6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. 7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. 8ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು. 9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. 16ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.
ಸುವಾರ್ತೆ
35“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ. 36ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ. 37ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 38ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
ಇಂದಿನ ಸಂತರು
- ಶಿಲುಬೆಯ ಸಂತ ಪಾಲ್, ಧರ್ಮಗುರು
- ಸಂತರಾದ ಜಾನ್ ಡಿ ಬ್ರೆಬೊಫ್ ಮತ್ತು ಐಸಾಕ್ ಜೋಗ್ಸ್, ಧರ್ಮಗುರುಗಳು, ಮತ್ತು ಸಂಗಡಿಗರು, ಹುತಾತ್ಮರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು