Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 19 ಅಕ್ಟೋಬರ್

ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 6 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಅಕ್ಟೋಬರ್ 2027

ಮಂಗಳವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Holy and Glorious Apostle Thomas (1st C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ (ಅಪೊಸ್ತಲ ತೋಮ)

1 ಕೊರಿ 4:9–16

9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು. 10ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು. 11ಈ ಗಳಿಗೆಯವರೆಗೂ ನಾವು ಹಸಿದವರೂ, ಬಾಯಾರಿಕೆಯುಳ್ಳವರೂ, ವಸ್ತ್ರವಿಲ್ಲದವರೂ, ಪೆಟ್ಟು ತಿನ್ನುವವರೂ ಮನೆಯಿಲ್ಲದವರೂ, 12ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. 13ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. 14ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. 15ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ. 16ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಸುವಾರ್ತೆ

ಲೂಕ 6:37–45

37“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು. 38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು. 39ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ. 40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು. 41“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ? 42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು. 43ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಹಾಗೆಯೇ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ. 45ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.

ಪತ್ರಿಕೆ

ಎಫೆ 5:20–26

20ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. 21ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. 22ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. 25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಸುವಾರ್ತೆ (ಅಪೊಸ್ತಲ ತೋಮ)

ಯೋಹಾ 20:19–31

19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು. 20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು. 22ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ. 23ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು. 24ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ. 25ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು. 26ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು” 27ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. 28ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು. 29ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು. 30ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ. 31ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 19 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು