ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 20 ಅಕ್ಟೋಬರ್
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಅಕ್ಟೋಬರ್ 2027
ಬುಧವಾರ · ಸಾಮಾನ್ಯ ಕಾಲದ 29ನೇ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ 29ನೇ ವಾರದ ಬುಧವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
12ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. 13ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ. 14ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. 15ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. 16ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ 17ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, 18ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
ಪ್ರತಿವಚನ ಕೀರ್ತನೆ
1ಯಾತ್ರಾಗೀತೆ; ದಾವೀದನದು. “ಯೆಹೋವನು ನಮಗಿಲ್ಲದಿದ್ದರೆ ನಮ್ಮ ಗತಿ ಏನಾಗುತ್ತಿತ್ತು?”, ಎಂದು ಇಸ್ರಾಯೇಲರೇ ಹೇಳಲಿ. 2ನರ ಮನುಷ್ಯರು ನಮಗೆ ವಿರುದ್ಧವಾಗಿ ಎದ್ದಾಗ, ಯೆಹೋವನು ನಮಗಿಲ್ಲದಿದ್ದರೆ, 3“ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; 4ನಿಶ್ಚಯವಾಗಿ ಪ್ರವಾಹವು ನಮ್ಮನ್ನು ಬಡಿದುಕೊಂಡು ಹೋಗುತ್ತಿತ್ತು; ನದಿಯು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತಿತ್ತು; 5ಮೀರಿದ ಪ್ರವಾಹವು ನಮ್ಮನ್ನು ಮುಳುಗಿಸಿಬಿಡುತ್ತಿತ್ತು.” 6ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಸೀಳಿಬಿಡಲು ಕೊಡಲಿಲ್ಲ. 7ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು. 8ಭೂಮಿ, ಆಕಾಶಗಳನ್ನು ಉಂಟುಮಾಡಿದ, ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಸುವಾರ್ತೆ
39ಕಳ್ಳನು ಬರುವ ಗಳಿಗೆಯು ಮನೆ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು, ತನ್ನ ಮನೆಗೆ ಕನ್ನಾ ಹಾಕಗೊಡಿಸುತ್ತಿರಲಿಲ್ಲವೆಂದು ತಿಳಿದುಕೊಳ್ಳಿರಿ. 40ಅದುದರಿಂದ ನೀವು ಸಹ ಸಿದ್ಧವಾಗಿರಿ. ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ” ಅಂದನು. 41ಆಗ ಪೇತ್ರನು, “ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತಿದ್ದೀಯೋ ಅಥವಾ ಎಲ್ಲರಿಗೋ?” ಎಂದು ಕೇಳಲು, 42ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು? 43ಯಜಮಾನನು ಬಂದು ಯಾವ ಆಳು ಹೀಗೆ ಮಾಡುವುದನ್ನು ಕಾಣುವನೋ ಆ ಆಳು ಧನ್ಯನು. 44ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಕಾರಿಯಾಗಿ ನೇಮಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 45ಆದರೆ ಆ ಆಳು, ನನ್ನ ಯಜಮಾನನು ಬರುವುದಕ್ಕೆ ತಡವಾಗುತ್ತದೆಯೆಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯುವುದಕ್ಕೂ ತೊಂದರೆಕೊಡುವುದಕ್ಕೂ ಮತ್ತು ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ, 46ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾದ ಚಿತ್ರಹಿಂಸೆಗೂ ಅಪನಂಬಿಗಸ್ತರಿಗೆ ಆಗತಕ್ಕ ಗತಿಯನ್ನು ಅವನಿಗೆ ನೇಮಿಸುವನು. 47ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. 48ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು