ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 20 ಅಕ್ಟೋಬರ್
ಆರ್ಥೊಡಾಕ್ಸ್ ಪಂಚಾಂಗ · ಅಕ್ಟೋಬರ್ 7 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಅಕ್ಟೋಬರ್ 2027
ಬುಧವಾರ · ಪಂಚಾಶತ್ತಮದ ನಂತರದ 18ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Martyrs Sergius and Baccus in Syria († 290-303)
ಉಪವಾಸದ ದಿನ
ಉಪವಾಸ: ಎಣ್ಣೆಯೊಂದಿಗೆ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. 30ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. 31“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ. 32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು. 33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಸುವಾರ್ತೆ
46“ಇದಲ್ಲದೆ ನೀವು ನನ್ನನ್ನು ‘ಕರ್ತನೇ, ಕರ್ತನೇ’ ಎಂದು ಕರೆದು ನಾನು ಹೇಳುವುದನ್ನು ಮಾಡದೆ ಇರುವುದೇಕೆ? 47ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ. 48ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು. 49ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.” 7:1ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಅಕ್ಟೋಬರ್ ಎಂದರೆ ನಾಗರಿಕ ಪಂಚಾಂಗದ 20 ಅಕ್ಟೋಬರ್. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು