Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಅಕ್ಟೋಬರ್ 2027 › 21 ಅಕ್ಟೋಬರ್

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 21 ಅಕ್ಟೋಬರ್ 2027

ಗುರುವಾರ · ಸಾಮಾನ್ಯ ಕಾಲದ 29ನೇ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ 29ನೇ ವಾರದ ಗುರುವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ದಿನದ ವಾಚನಗಳು

ಮೊದಲನೆಯ ವಾಚನ

ರೋಮಾ 6:19–23

19ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು ಲೋಕದ ರೀತಿಯಾಗಿ ಮಾತನಾಡುತ್ತೇನೆ. ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ. 20ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. 21ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ? 22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ. 23ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಪ್ರತಿವಚನ ಕೀರ್ತನೆ

ಕೀರ್ತ 1:1–4, 6

1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಸುವಾರ್ತೆ

ಲೂಕ 12:49–53

49“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕಬೇಕೆಂದು ಬಂದೆನು. ಅದು ಇಷ್ಟರೊಳಗೆ ಹತ್ತಿಕೊಂಡಿದ್ದರೆ ನನಗೆ ಎಷ್ಟೋ ಸಂತೋಷ. 50ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ. 51ನಾನು ಭೂಮಿಯಲ್ಲಿ ಸಮಾಧಾನವನ್ನುಂಟು ಮಾಡುವುದಕ್ಕೆ ಬಂದೆನೆಂದು ಭಾವಿಸುತ್ತೀರೋ? ಅದಕ್ಕೆ ಬರಲಿಲ್ಲ, ಭಿನ್ನಭೇದಗಳನ್ನು ಉಂಟುಮಾಡುವದಕ್ಕೆ ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ. 52ಹೇಗೆಂದರೆ, ಒಂದೇ ಮನೆಯಲ್ಲಿರುವ ಐದು ಮಂದಿಯೊಳಗೆ ಇಬ್ಬರಿಗೆ ವಿರೋಧವಾಗಿ ಮೂವರು, ಮೂವರಿಗೆ ವಿರೋಧವಾಗಿ ಇಬ್ಬರೂ ಏಳುವರು. 53ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು. ಅತ್ತೆಗೆ ವಿರೋಧವಾಗಿ ಸೊಸೆಯು ಪರಸ್ಪರ ಭಿನ್ನಭೇದವುಳ್ಳವರಾಗಿ ವಿಂಗಡಿಸಿ ಹೋಗುವರು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು